ಆನೇಕಲ್: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆಯೇ ಲಾರಿ ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.
45 ವರ್ಷದ ಪ್ರಿಯಾ ಮೃತ ಮಹಿಳೆ. ಬೈಕ್ ನಲ್ಲಿ ಪೋಸ್ಟ್ ಗಳನ್ನು ಕೊಡಲೆಂದು ಮಹಿಳೆ ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಮಹಿಳೆ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಲಾರಿ ಹರಿದಿದ್ದು, ಲಾರಿ ಚಕ್ರದಡಿ ಸಿಲುಕಿ ಮಹಿಳೆ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಸೂರ್ಯನಗರ ಠಾಣೆ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
