BREAKING NEWS: ಬೈಕ್-ಲಾರಿ ಭೀಕರ ಅಪಘಾತ: 3 ವರ್ಷದ ಮಗು ಸ್ಥಳದಲ್ಲೇ ದುರ್ಮರಣ

ದೊಡ್ಡಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 3 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಕಸ್ತೂರು ಗೇಟ್ ಬಳಿ ನಡೆದಿದೆ.

ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ ಬೈಕ್ ಮೇಲೆಯೇ ಹರಿದು ಹೋಗಿದೆ. ಸ್ಥಳದಲ್ಲೇ 3 ವರ್ಷದ ಮಗು ಧನ್ವಿತ್ ಸಾವನ್ನಪ್ಪಿದ್ದು, ಮಗುವಿನ ತಂದೆ ಆಂಜನೇಯ ಹಾಗೂ ತಾಯಿ ಮಮತಾಗೆ ಗಂಭೀರ ಗಾಯಗಳಾಗಿವೆ.

ಅಪಘಾತದ ಬಳಿಕ ಲಾರಿ ಚಾಲಕ ಎಸ್ಕೇಪ್ ಆಗಲು ಯತ್ನಿಸಿದ್ದು, 1 ಕಿ.ಮೀ ವರೆಗೆ ಲಾರಿ ಓಡಿಸಿಕೊಂಡು ಹೋಗಿದ್ದಾನೆ. ಸದ್ಯ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read