ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬೈಕ್ ನಡುವೆ ಸಂಭಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.
ಯೂ ಟರ್ನ್ ತೆಗೆದುಕೊಳ್ಳುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನ ದೇಹ ಛಿದ್ರ ಛಿದ್ರವಾಗಿದೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		