HomeKarnatakaBIG NEWS: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ; ಓರ್ವ ಸಾವು, ಮಹಿಳೆ ಸ್ಥಿತಿ ಗಂಭಿರ

BIG NEWS: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ; ಓರ್ವ ಸಾವು, ಮಹಿಳೆ ಸ್ಥಿತಿ ಗಂಭಿರ

ಹುಬ್ಬಳ್ಳಿ: ಬೈಕ್ ಹಾಗೂ ಟಿಪ್ಪರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ನಡೆದಿದೆ.

ಇಂಗಳಹಳ್ಳಿಯ ನಿವಾಸಿ ರಾಜೇಸಾಬ್ ಕೊಲ್ಯಾಡಿ (24) ಮೃತ ದುರ್ದೈವಿ. ಬೈಕ್ ನಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಹುಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಮುಂಭಾಗ ಕುಳಿತಿದ್ದ 12 ವರ್ಷದ ಬಾಲಕ ಪಾರಾಗಿದ್ದಾನೆ.

ಕುಡಿದ ಅಮಲಿನಲ್ಲಿ ಚಾಲಕ ಟಿಪ್ಪರ್ ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಗ್ರಾಮಸ್ಥರು ಟಿಪ್ಪರ್ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular