HomeKarnatakaಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಭೀರ

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಭೀರ

ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ.

ಅನ್ವರ್ ಶೇಖ್ (34) ಮೃತ ದುರ್ದೈವಿ. ಮೊಹಮ್ಮದ್ ನಾದಿರ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಅನ್ವರ್ ಮೇಲೆಯೇ ಟಿಪ್ಪರ್ ಚಕ್ರ ಹರಿದು ಹೋಗಿದೆ. ಸ್ಥಳದಲ್ಲೇ ಅನ್ವರ್ ಸಾವನ್ನಪ್ಪಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular