HomeKarnatakaನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರವಾರ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾರುಗಾರ ಬಳಿ ನಡೆದಿದೆ.

ಮನೋಜ್ ಜಿ. ಹೆಗಡೆ ಮೃತ ವಿದ್ಯಾರ್ಥಿ. ಶಿರಸಿಯ ಎಂ.ಇ.ಎಸ್.ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ. ಮೊದಲ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಓದುತ್ತಿದ್ದ. ಇಂದು ಪರೀಕ್ಷೆ ಇದ್ದ ಕಾರಣ ಎಕ್ಸಾಂ ಬರೆಯಲೆಂದು ಬೈಕ್ ನಲ್ಲಿ ತೆರುತ್ತಿದ್ದ. ಈ ವೇಳೆ ಅಪಘಾತ ಸಂಭವಿಸಿದೆ.

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಶಿರಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular