ಹಾಸನ: ಬೈಕ್ ಹಾಗೂ ಲಾರಿ ನಡುವೆ ಸಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ.
ಆಕಾಶ್ (22) ಹಾಗೂ ಶಂಕರ್ (45) ಮೃತರು. ಇಬ್ಬರೂ ವಲಹಳ್ಳಿ ಗ್ರಾಮದ ನಿವಾಸಿಗಳು. ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮುಗಿಸಿಕೊಂಡು ಸ್ವಗ್ರಾಮಕ್ಕೆ ವಾಪಾಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಹಿಂಬದಿಯಿಂದ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ಅತಿ ವೇಗವೇ ಕಾರಣವಾಗಿದೆ.
ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.