HomeLatest NewsBREAKING: ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದು ಹೋದ ಲಾರಿ: ಮಹಿಳೆ...

BREAKING: ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದು ಹೋದ ಲಾರಿ: ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಮಹಿಳೆ ಮೇಲೆ ಸಿಮೆಂಟ್ ಲಾರಿಯೊಂದು ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯ ಕೋಗಿಲು ಕ್ರಾಸ್ ಬಳಿ ನಡೆದಿದೆ.

ಪತಿಯ ಜೊತೆ ಮಹಿಳೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಮಹಿಳೆ ಕೆಳಗೆ ಬಿದ್ದಿದ್ದಾರೆ. ಹಿಂದಿನಿಂದ ಬಂದ ಸಿಮೆಂಟ್ ಲಾರಿ ಮಹಿಳೆಯ ಮೇಲೆ ಹರಿದಿದೆ.

42 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular