HomeLatest NewsBIG NEWS: ಬೈಕ್- ಲಾರಿ ಭೀಕರ ಅಪಘಾತ: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

BIG NEWS: ಬೈಕ್- ಲಾರಿ ಭೀಕರ ಅಪಘಾತ: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಕಾರವಾರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಕ್ರಾಸ್ ಬಳಿ ನಡೆದಿದೆ.

ಭಟ್ಕಳದ ಫಿರ್ದೌಸ್ ನಗರ ನಿವಾಸಿ ಮೊಹಮ್ಮದ್ ಮೊಹ್ತೆಶಾಂ (18) ಮೃತ ದುರ್ದೈವಿ. ಮೊಹಮ್ಮದ್ ತೆರಳುತ್ತಿದ್ದ ಬೈಕ್ ಗೆ ಕೇರಳಕಡೆಯಿಂದ ಪ್ಲೈವುಡ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೊಹಮ್ಮದ್ ಲಾರಿ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಮೊಹಮ್ಮದ್ ದ್ವಿತೀಯ ಪಿಯುಸಿ ಓದುತ್ತಿದ್ದ. ಭಟ್ಕಳ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular