HomeKarnatakaಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು

ಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು

  ಕಾರವಾರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ.

ಕಾರ್ ಮತ್ತು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುನನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಕೊಪ್ಪ ನಿವಾಸಿ ಹಳಿಯಾಳದಲ್ಲಿ ಐಟಿಐ ಓದುತ್ತಿರುವ ದರ್ಶನ್(18), ಹುಣಶೆಟ್ಟಿಕೊಪ್ಪ ನಿವಾಸಿ ಟೈಲ್ಸ್ ಕಾರ್ಮಿಕ ರಾಜು ಸುರೇಶಾಚಾರಿ(18) ಮೃತಪಟ್ಟವರು. ಯಲ್ಲಾಪುರ ನಿವಾಸಿ ಬಾರ್ ಬೆಂಡರ್ ಜಬೀರ್ ಮಹಮ್ಮದ್(18) ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಕಾರ್ ತಿರುಗಿದಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಂತಿದ್ದ ಮತ್ತೊಂದು ಕಾರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular