ಆಟೋ, ಕ್ಯಾಬ್ ಚಾಲಕರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು: ಹೈಕೋರ್ಟ್ ಸೂಚನೆ ಮೇರೆಗೆ ಕರ್ನಾಟಕದಲ್ಲಿ ಬೈಕ್ ಕ್ಯಾಬ್ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ನೀಡಿದ್ದಾರೆ.

ಈ ಮೂಲಕ ಆಟೋ, ಕ್ಯಾಬ್ ಚಾಲಕರ ಹಲವು ವರ್ಷಗಳ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದ್ದು, ರಾಜ್ಯದಲ್ಲಿ ಇನ್ಮುಂದೆ ಬೈಕ್ ಕ್ಯಾಬ್ ನಿಷೇಧಿಸಲಾಗಿದೆ. ರಾಜ್ಯದಲ್ಲಿ ಬೈಕ್ ಕ್ಯಾಬ್ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಉಬರ್, ಎ ಎನ್ ಐ ಟೆಕ್ನಾಲಜೀಸ್ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಆರು ವರಗಳ ಒಳಗಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಲ್ಲಿಸುವಂತೆ ಆದೇಶ ಹೊರಡಿಸಿತ್ತು. ಸಚಿವ ರಾಮಲಿಂಗಾರೆಡ್ಡಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದಾರೆ. ಅಗತ್ಯ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read