ಬೆಂಗಳೂರು: ಯುವತಿ ಜೊತೆಗೆ ರ್ಯಾಪಿಡೊ ಬೈಕ್ ಟ್ಯಾಕ್ಸಿ ಚಾಲಕನ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲೋಕೇಶ್(28) ಬಂಧಿತ ಆರೋಪಿ. ಬೆಂಗಳೂರಿನ ಉಳ್ಳಾಲದ ಮುನಿಯಪ್ಪ ಲೇಔಟ್ ನಿವಾಸಿಯಾಗಿರುವ ಆರೋಪಿ ಲೋಕೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನಾಗಿದ್ದ ಆರೋಪಿ ಬೈಕ್ ಚಾಲನೆ ಮಾಡುತ್ತಿದ್ದ ವೇಳೆ ಹಿಂಬದಿ ಕುಳಿತಿದ್ದ ಯುವತಿಯ ಕಾಲು, ತೊಡೆ ಸವರಿ ಅಸಭ್ಯವಾಗಿ ವರ್ತಿಸಿದ್ದ. ನವೆಂಬರ್ 6ರಂದು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ವಿಡಿಯೋ ಮಾಡಿ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಮೈಮುಟ್ಟಿ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.
