HomeLatest NewsBREAKING: ಬೈಕ್ ಟ್ಯಾಕ್ಸಿ ಚಾಲಕನಿಂದ ಯುವತಿಯ ಮೇಲೆ ಹಲ್ಲೆ ಪ್ರಕರಣ: FIR ದಾಖಲು

BREAKING: ಬೈಕ್ ಟ್ಯಾಕ್ಸಿ ಚಾಲಕನಿಂದ ಯುವತಿಯ ಮೇಲೆ ಹಲ್ಲೆ ಪ್ರಕರಣ: FIR ದಾಖಲು

ಬೆಂಗಳೂರು: ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ನಡುರಸ್ತೆಯಲ್ಲಿ ಯುವತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಚಾಲಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್ ವಿರುದ್ಧ ಬೆಂಗಳೂರಿನ ಜಯನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಬಿಎಸ್ ಎಸ್ 352, 115(2), 79 ಅಡಿ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರಂಭದಲ್ಲಿ ಯುವತಿ ತನಗೆ ದೂರು ನೀಡಲು ಇಷ್ಟವಿಲ್ಲ ಎಂದು ಸುಮ್ಮನಿದ್ದಳು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಕೆಯ ಸ್ನೇಹಿತರು ದೂರು ನೀಡುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಯುವತಿ ಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಹಾಗೂ ಯುವತಿ ಇಬ್ಬರನ್ನೂ ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular