ಹಾಸನ: ಹಾಸನದಲ್ಲಿ ಜಾತಿಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಹಾಗೂ ಏಳು ಜನರ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ಬೆನ್ನಲ್ಲೇ ಇದೀಗ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ.
ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಬೈಕ್ ಗೆ ನಾಯಿ ಅಡ್ಡ ಬಂದ ಪರಿಣಾಮ ನಾಯಿ ತಪ್ಪಿಸಲು ಹೋಗಿ ಶಿಕ್ಷಕಿ ಕೆಳಗೆ ಬಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಬದಿ ಬಿದ್ದಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರದ ವಡ್ಡರಹಳ್ಳಿ ಬಳಿ ಈ ಘಟನೆ ನಡೆದಿದೆ.
ರಾಧಾ ಪ್ರಜ್ಞೆತಪ್ಪಿ ಬಿದ್ದಿರುವ ಶಿಕ್ಷಕಿ. ತಕ್ಷಣ ಸ್ಥಳೀಯರು ಶಿಕ್ಷಕಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.