ವರ್ಗಾವಣೆಗೊಂಡ ಶಿಕ್ಷಕನಿಗೆ ಗ್ರಾಮಸ್ಥರಿಂದ ಭರ್ಜರಿ ಗಿಫ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ವಳೂರು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಪಲ್ಸರ್ ಬೈಕ್ ಉಡುಗೊರೆಯಾಗಿ ನೀಡಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ.

16 ವರ್ಷಗಳಿಂದ ಶಿಕ್ಷಕ ಸಂತೋಷ್ ಕಾಂಚನ್ ಅವರು ವಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೌಟುಂಬಿಕ ಕಾರಣಕ್ಕಾಗಿ ಇತ್ತೀಚೆಗೆ ಕುಂದಾಪುರದ ವಾರಾಹಿ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡಿದ್ದಾರೆ.

ಕಾಡಿನ ಮಧ್ಯೆ ಇರುವ ಶಾಲೆಯಲ್ಲಿಯೂ ಉಳಿದು ರಾತ್ರಿಯೂ ಮಕ್ಕಳಿಗೆ ಪಾಠ ಮಾಡುತ್ತಿದ್ದ ಸಂತೋಷ್ ಅಲ್ಲೇ ವಾಸ್ತವ ಇದ್ದರು. ಊರಿಗೆ ಸಂಚಾರ ವ್ಯವಸ್ಥೆ ಇಲ್ಲದ ಕಾರಣ ತಮ್ಮ ಬೈಕ್ ಮೂಲಕವೇ ಮಕ್ಕಳನ್ನು ಪ್ರತಿಭಾ ಕಾರಂಜಿಗೆ ಕರೆದೊಯ್ಯುತ್ತಿದ್ದರು.

ಅಲ್ಲದೇ, ಅನಾರೋಗ್ಯ ಉಂಟಾದ ಸಂದರ್ಭದಲ್ಲಿ ಗ್ರಾಮಸ್ಥರನ್ನು ಹಗಲು, ರಾತ್ರಿ ಎನ್ನದೇ ಕರೆದುಕೊಂಡು ಹೋಗಲು ಬರುತ್ತಿದ್ದರು. ಈ ಕಾರಣಕ್ಕೆ ಅವರಿಗೆ ಬೈಕ್ ಕೊಡುಗೆ ನೀಡಿ ಕೃತಜ್ಞತೆ ಸಲ್ಲಿಸಿದ್ದಾಗಿ ಗ್ರಾಮಸ್ಥರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read