HomeKarnatakaಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಬಳಿ ನಡೆದಿದೆ.

ಗುಂಜೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, 18 ವರ್ಷದ ರಾಕೇಶ್ ಮೃತ ಯುವಕ. ಉತ್ತರ ಭಾರತ ಮೂಲದವನು ಎಂದು ತಿಳಿದುಬಂದಿದೆ.

ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೈಕ್ ನಲ್ಲಿ ತೆರಳುತ್ತಿದ್ದಾಗ ಟಿಪ್ಪರ್ ಗೆ ಡಿಕ್ಕಿಯಾಗಿದೆ. ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular