ದೇವನಹಳ್ಳಿ: ಎರಡು ಬೈಕ್ ಗಳಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ದೇವನಹಳ್ಳಿ ಏರ್ ಪೋರ್ಟ್ ಬಳಿ ನಡೆದಿದೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
15 ದಿನಗಳ ಹಿಂದೆ ಇದೇ ಟಿಪ್ಪರ್ ಲಾರಿ 8 ಕಾರುಗಳಿಗೆ ಡಿಕ್ಕಿ ಹೊಡೆದಿತ್ತು. ಇದೀಗ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಬೈಕ್ ಸವಾರನನ್ನೇ ಬಲಿ ಪಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.