ರಾಯಚೂರು: ಬೈಕ್ ಗೆ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ನರಗುಂದ ರಸ್ತೆಯಲ್ಲಿ ನಡೆದಿದೆ.
ಹಸೀನಾ ಬೇಗಂ (28) ಹಾಗೂ ರಂಜಾನ್ ಸಾಬ್ (30) ಮೃತ ದಂಪತಿ. ಅರಶಿಣಗಿ ಗ್ರಾಮದಿಂದ ದೇವದುರ್ಗಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಹಸೀನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪತಿಯನ್ನು ಆಸ್ಪತ್ರೆಗೆ ಸಾಗಿಸುತ್ತುದ್ದ ವೇಳೆ ಮಾರ್ಗ ಮಧ್ಯೆ ಪತಿ ರಂಜಾನ್ ಕೂಡ ಕೊನೆಯುಸಿರೆಳೆದಿದ್ದಾರೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

