HomeAutoಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಯುವಕ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಮನೆಗೆ ತೆರಳುವಾಗ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಸಮೀಪ ಮೀನಿನಕೊಪ್ಪ ಗ್ರಾಮದ ಬಳಿ ನಡೆದಿದೆ.

ರಾಮಪ್ಪ(26) ಮೃತಪಟ್ಟ ಯುವಕ. ಕೆಲಸದ ನಿಮಿತ್ತ ಕೋಣಂದೂರಿಗೆ ತೆರಳಿದ್ದ ಅವರು ಮನೆಗೆ ವಾಪಸ್ ಬರುವಾಗ ಬೈಕ್ ಮೇಲೆ ಮರ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಮಪ್ಪ ಮನೆಗೆ ಆಗಮಿಸದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದಾಗ ಮರ ಬಿದ್ದು ಮೃತಟ್ಟಿರುವುದು ಗೊತ್ತಾಗಿದೆ. ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular