HomeKarnatakaBIG NEWS: ಮಾರಕಾಸ್ತ್ರ ಹಿಡಿದು ಬೈಕ್ ವ್ಹೀಲಿಂಗ್: ಇಬ್ಬರು ಆರೋಪಿಗಳು ಅರೆಸ್ಟ್

BIG NEWS: ಮಾರಕಾಸ್ತ್ರ ಹಿಡಿದು ಬೈಕ್ ವ್ಹೀಲಿಂಗ್: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಮಾರಕಾಸ್ತ್ರಗಳನ್ನು ಝಳಪ್ಪಿಸುತ್ತಾ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಕಾಮಾಕ್ಷಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಮಹೇಶ್ ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು. ಔಟರ್ ರಿಂಗ್ ರಸ್ತೆಯ ಚೌಡೇಶ್ವರಿ ನಗರ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರಗಳನ್ನು ರಸ್ತೆಗೆ ಉಜ್ಜುತ್ತಾ, ಸ್ಕೂತರ್ ನಲ್ಲಿ ವ್ಹೀಲಿಂಗ್ ಮಾಡುತ್ತ ಸಾಗಿದ್ದ ಆರೋಪಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇಬ್ಬರು ಯುವಕರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಏರಿಯಾದಲ್ಲಿ ಭಯ ಹುಟ್ಟಿಸಲೆಂದು ಈ ರೀತಿ ಮಾಡಿದ್ದಾಗಿ ವಿಚಾರಣೆ ವೇಳೆ ಪುಂಡರು ಒಪ್ಪಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular