HomeKarnatakaಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸೋಲುರು ಗ್ರಾಮದಲ್ಲಿ ನಡೆದಿದೆ.

45 ವರ್ಷದ ಶ್ರೀನಿವಾಸ್ ಮೃತ ದುರ್ದೈವಿ. ಬೆಂಗಳೂರಿನ ಉಪ್ಪಾರಪೇಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಿವಾಸ್, ಸೋಲೂರು ಮೂಲದವರಾಗಿದ್ದು, ಕಮಲಾನಗರದಲ್ಲಿ ವಾಸವಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಎರಡು ಬೈಕ್ ಗಳ ನಡಿವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೋರ್ವ ಬೈಕ್ ಸವಾರನಿಗೆ ಗಾಯಗಳಾಗಿವೆ. ಆದಾಗ್ಯೂ ಬೈಕ್ ಸವಾರ ಸ್ಥಳದಲ್ಲೇ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular