HomeLive NewsSHOCKING: ಪೊಲೀಸರ ಎದುರೇ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾದ ಯುವಕ: ಡ್ರಂಕ್ ಆಂಡ್ ಡ್ರೈವ್...

SHOCKING: ಪೊಲೀಸರ ಎದುರೇ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾದ ಯುವಕ: ಡ್ರಂಕ್ ಆಂಡ್ ಡ್ರೈವ್ ತಪಾಸಣೆ ವೇಳೆ ಘಟನೆ

ಬೆಂಗಳೂರು: ಡ್ರಂಕ್ ಆಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದ ಪೊಲೀಸರ ಜೊತೆಗೆ ಕಿರಿಕ್ ಮಾಡಿದ ವ್ಯಕ್ತಿಯೊಬ್ಬ, ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ.

ಕುಡಿದು ವಾಹನ ಚಲಾಯಿಸುತ್ತಿದ್ದವರ ವಾಹನ ತಡೆದು ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಸಂಚಾರಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾನೆ. ಬ್ರೀತ್ ಅನಲೈಸರ್ ಪರೀಕ್ಷೆಗೆ ನಿರಾಕರಿಸಿದ್ದಾನೆ. ಗಲಾಟೆ ಮಾಡಿದ್ದಾನೆ. ಇದೇ ವೇಳೆ ತನ್ನ ಬೈಕ್ ಗೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ.

ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಕವಿಕಾ ಜಂಕ್ಷನ್ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಬೈಕ್ ಸವಾರನನ್ನು ಬಿಟಿಎಂ ಲೇಔಟ್ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ ವ್ಯಕ್ತಿ ಕುಡಿದು ಬೈಕ್ ಓಡಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಬೈಕ್ ತಡೆದು ತಪಾಸಣೆ ನಡೆಸುತ್ತಿದ್ದ ವೇಳೆ ಆತ ಗಲಾಟೆ ಅಮಡಿ ಬೆದರಿಕೆ ಹಾಕಿದ್ದಲ್ಲದೇ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿ ನಂದಿಸಿದ ಪೊಲೀಸರು ಸದ್ಯ ಬೈಕ್ ನ್ನು ವಶಕ್ಕೆ ಪಡೆದು ಠಾಣೆಗೆ ರವಾನಿಸಿದ್ದಾರೆ. ಪರಾರಿಯಾಗಿರುವ ವ್ಯಕ್ತಿಗೆ ಹುಡುಕಾಟ ನಡೆಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular