HomeLatest Newsಬೈಕ್‌-ಲಾರಿ ನಡುವೆ ಭೀಕರ ಅಪಘಾತ: ಅಣ್ಣ-ತಂಗಿ ಸ್ಥಳದಲ್ಲೇ ಸಾವು

ಬೈಕ್‌-ಲಾರಿ ನಡುವೆ ಭೀಕರ ಅಪಘಾತ: ಅಣ್ಣ-ತಂಗಿ ಸ್ಥಳದಲ್ಲೇ ಸಾವು

ಕೋಲಾರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ಇಬ್ಬರೂ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡು ಗಡಿಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಕೆಜಿ ಎಫ್ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ವಿ.ಕೋಟ – ಪ್ಯಾರ್ನಂಬಟ್ ಗಡಿಯಲ್ಲಿ ಈ ಘಟನೆ ನಡೆದಿದೆ. ಬೈಕ್‌ಗೆ ಡಿಕ್ಕಿಯಾಗಿ ಲಾರಿ ಕೆಳಗೆ ಸಿಲುಕಿದ ಬೈಕ್ ಅನ್ನು ಲಾರಿ ಸುಮಾರು ಅರ್ಧ ಕಿ.ಮೀ ದೂರ ಎಳೆದೊಯ್ದಿದೆ. ಈ ಪರಿಣಾಮ ಅಣ್ಣ ತಂಗಿ ಇಬ್ಬರೂ ಲಾರಿಯಡಿ ಸಿಲುಕಿ ಅಪ್ಪಚ್ಚಿಯಾಗಿದ್ದಾರೆ.

ಕೆಜಿಎಫ್ ನಗರದ ಪಾರಂಡಹಳ್ಳಿ ನಿವಾಸಿಗಳಾದ ಬಾಲಾಜಿ ಹಾಗೂ ಆತನ ತಂಗಿ ಮಹಾಶ್ರೀ ಮೃತರು. ಇನ್ನೂ ಮೃತರ ದೇಹಗಳು ಲಾರಿಯಡಿ ಸಿಲುಕಿದ ಪರಿಣಾಮ ಮೃತ ದೇಹಗಳನ್ನ ಹೊರ ತೆಗೆಯಲು ಸ್ಥಳೀಯರು ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ತಮಿಳುನಾಡು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular