ನೆಲಮಂಗಲ : ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲದ ಭಿನ್ನಮಂಗಲ ಟೋಲ್ ಬಳಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಘಟನೆ ನಡೆದಿದೆ. ನೆಲಮಂಗಲದಿಂದ ತುಮಕೂರಿಗೆ ಹೋಗುವ ಹೆದ್ದಾರಿಯಲ್ಲಿ ಬೈಕ್ ಸವಾರನಿಗೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಕೂಡಲೇ ಟಿಟಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ, ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಸದ್ಯ ಶವವನ್ನು ನೆಲಮಂಗಲ ಸರ್ಕಾರಿ ಶವಗಾರಕ್ಕೆ ರವಾನಿಸಲಾಗಿದೆ.
TAGGED:ಹಿಟ್ & ರನ್