ಬೆಂಗಳೂರು: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಐಡಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಪೊಲೀಸರು, ಬಳಿಕ ಕಸ್ಟಡಿಗೆ ಪಡೆದಿದ್ದಾರೆ. ಕಿರಣ್, ಮದನ್, ವಿಮಲ್ ಸೇರಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.