ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಭಾರತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅನಿಲ್, ಅರುಣ್ ಹಾಗೂ ನವೀನ್ ಎಂದು ಗುರುತುಸಲಾಗಿದೆ. ಬಂಧಿತ ಅನಿಲ್ ಶಾಸಕ ಭೈರತಿ ಬಸವರಾಜ್ ಸಂಬಂಧಿ ಎಂದು ತಿಳಿದುಬಂದಿದೆ. ಇನ್ನು ಅರುಣ್ ಹಾಗೂ ನವೀನ್ ಪ್ರಕರಣದ ಮೊದಲ ಆರೋಪಿ ಜಗದೀಶ್ ಸಹಚರರು.
ಬಿಕ್ಲು ಶಿವ ಕೊಲೆ ಪ್ರಕರಣದ ಬಳಿಕ ಆರೋಪಿಗಳಾದ ಅರುಣ್ ಹಾಗೂ ನವೀನ್ ತಲೆಮರೆಸಿಕೊಂಡಿದ್ದರು. ಸದ್ಯ ಮೂವರನ್ನು ಬಂಧಿಸಿರುವ ಭಾರತಿನಗರ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.