HomeLatest NewsBREAKING: ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

BREAKING: ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ಬೆಂಗಳೂರು: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಭೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಇತ್ತೀಚೆಗೆ ಹೈಕೋರ್ಟ್ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ವಿಚಾರಣಾಧೀನ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಈಗ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಇನ್ನಷ್ಟು ಹೆಚ್ಚಾಗಿದೆ.

ಬಂಧನ ಭೀತಿಯಲ್ಲಿರುವ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದು, ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular