HomeKarnatakaಬಿಕ್ಲು ಶಿವ ಕೊಲೆ ಕೇಸ್: ಶಾಸಕ ಬೈರತಿ ಬಸವರಾಜ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯ

ಬಿಕ್ಲು ಶಿವ ಕೊಲೆ ಕೇಸ್: ಶಾಸಕ ಬೈರತಿ ಬಸವರಾಜ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಕೆಆರ್ ಪುರ ಶಾಸಕ ಬೈರತಿ ಬಸವರಾಜ ಕಸ್ಟಡಿ ಅವಧಿ ಫೆಬ್ರವರಿ 21ಕ್ಕೆ ಮುಕ್ತಾಯವಾಗಲಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸುವ ಸಾಧ್ಯತೆ ಇದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಅವರನ್ನು ಹೆಚ್ಚುವರಿ ವಿಚಾರಣೆ ಮಾಡುವುದು ಬಾಕಿ ಇರುವ ಕಾರಣ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡುವ ಸಾಧ್ಯತೆ ಇದೆ.

ಭಾರತೀನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ವೇಳೆ ನೀಡಿದ ಹೇಳಿಕೆಗೂ ಈಗಿನ ಹೇಳಿಕೆಗಳಿಗೆ ವ್ಯತ್ಯಾಸ ಕಂಡು ಬಂದಿದೆ. ತಾಂತ್ರಿಕ ಸಾಕ್ಷ್ಯಾಧಾರ ಮತ್ತು ಕೊಲೆಯ ಪ್ರಮುಖ ಆರೋಪಿಗಳೊಂದಿಗೆ ಬೈರತಿ ಬಸವರಾಜ್ ಹೊಂದಿರುವ ಸಂಪರ್ಕಗಳ ಬಗ್ಗೆ ಆಡಿಯೋ ವಿಡಿಯೋ ಸಹಿತ ಪ್ರಶ್ನೆ ಕೇಳಿರುವ ಸಿಐಡಿ ಮುಂದೆ ನೀಡಿದ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಮುಖ ಆರೋಪಿ ಜಗದೀಶ್ ಮತ್ತು ನಾಲ್ಕನೇ ಆರೋಪಿಯನ್ನು ಬಾಡಿ ವಾರೆಂಟ್ ಮೇಲೆ ಪಡೆದು ವಿಚಾರಣೆ ನಡೆಸುವುದು ಬಾಕಿಯಿದ್ದು, ಬೈರತಿ ಬಸವರಾಜ್ ಅನಾರೋಗ್ಯ ಕಾರಣ ನೀಡಿದ ಪರಿಣಾಮ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್ ಮುಂದೆ ಮನವಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular