ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ರಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಲಗೈಬಂಟ ಅಜಿತ್ ಎಂಬಾತನಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನ ಭೀತಿಯಲ್ಲಿ ಆತ ನಾಪತ್ತೆಯಾಗಿದ್ದಾನೆ.
ಆರೋಪಿ ಕಿರಣ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ ಪೊಲೀಸರಿಗೆ ಮಲಯಾಳಿ ಅಜಿತ್ ಗೆ ಸೇರಿದ ಕೆಲವು ದಾಖಲೆಗಳು ಲಭ್ಯವಾಗಿದ್ದವು. ಈ ದಾಖಲೆಗಳ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ಸ್ವೀಕರಿಸೊದ್ದ ಅಜಿತ್ ವಿಳಾಸವಿಲ್ಲದ ಲೆಟರ್ ಹೆಡ್ ನಲ್ಲಿ ಉತ್ತರವನ್ನೂ ನೀಡಿದ್ದ.
ನಾನು ಹೈಕೋರ್ಟ್ ವಕೀಲ. ನನಗೂ ಕೊಲೆ ಆರೋಪಿಗಳಿಗೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಈ ಕೇಸ್ ನಲ್ಲಿ ಸಿಲುಕಿಸಲು ಪ್ರಯತ್ನಿಸಿದರೆ ನಾನು ಕಾನೂನು ರೀತಿಯಲ್ಲಿ ಕ್ರಮಕ್ಕೆ ಮುಂದಾಗುತ್ತೇನೆ ಎಂದು ಆವಾಜ್ ಹಾಕಿದ್ದ. ಇದಕ್ಕೂ ಪೊಲೀಸರು ಕೆಲ ಪ್ರಶ್ನೆ ಕೇಳಿದ್ದರು. ಇದೀಗ ಟಿ.ಸಿ.ಪಾಳ್ಯದಲ್ಲಿರುವ ಸಿನಿಮಾಸ್ ವಿ ಗ್ರೂಪ್ ನ ಕಚೇರಿಯನ್ನು ಖಾಲಿ ಮಾಡಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.