ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರನಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ದೂರುದಾರೆ ದೊಡ್ಡವರ ಕೈವಾಡವಿದೆ ಎಂದು ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ದೂರು ದಾಖಲಿಸಿದ್ದರು. ಆದರೆ ಈಗ ಅವರೇ ಠಾಣೆಗೆ ಬಂದು ಶಾಸಕರ ಪಾತ್ರವೇನೂ ಇಲ್ಲ ಎಂದು ಹೇಳುತ್ತಿದ್ದಾರೆ ಎಂದರು.
ಅದೇನೇ ಇರಲಿ. ಈಗಾಗಲೇ ಎಫ್ಐಆರ್ ನಲ್ಲಿ ಶಾಸಕರ ಹೆಸರು ನಮೂಡಾಗಿರುವುದರಿಂದ ಪೊಲೀಸರು ಅವರನ್ನು ಕರೆಸಿ ವಿಚಾರಣೆ ನಡೆಸುತ್ತಾರೆ. ಅವರ ಪಾತ್ರ ಇದೆಯಾ, ಇಲ್ಲವಾ ಎಂಬುದು ವಿಚಾರಣೆ ಬಳಿಕ ಗೊತ್ತಾಗಲಿದೆ ಎಂದರು.