ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ವಿರುದ್ಧ ಪೊಲೀಸರು ರೌಡಿಶೀಟ್ ತೆರೆದಿದ್ದಾರೆ.
ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಈವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ 9 ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ. ಕಿಂಗ್ ಪಿನ್ ಕಿರಣ್, ಮದನ್, ವಿಮಲ್, ಪ್ರದೀಪ್, ಪ್ಯಾಟ್ರಿಕ್, ಸ್ಯಾಮುಯೆಲ್ ಸೇರಿದಂತೆ 9 ಆರೋಪಿಗಳ ವಿರುದ್ಧ ಭಾರತಿ ನಗರ ಠಾಣೆ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದಾರೆ.
ತನಿಖೆ ವೇಳೆ ಬಂಧಿತ ಆರೋಪಿಗಳ ಮೇಲೆ ಹಲವು ಕೇಸ್ ಗಳಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ರೌಡಿಶೀಟ್ ತೆರೆಯಲಾಗಿದೆ. ಇನ್ನು ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವರ್ಗಾವಣೆ ಮಾಡಿದ್ದು, ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.