ಬೆಂಗಳೂರು: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ಜಗದೀಶ್ ಸಿಐಡಿ ಪೊಲೀಸ್ ಕಸ್ಟಡಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಆತನನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಆರೋಪಿ ಜಗದೀಶ್ ಗೆ ಸೆಪ್ಟೆಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದೆ.
ಇದೇ ವೇಳೆ ಪ್ರಕರಣದ ನಾಲ್ವರು ಆರೋಪಿಗಳನ್ನು ಸಿಐಡಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಕಿರಣ್, ಮದನ್, ವಿಮಲ್ ಸೇರಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.