HomeKarnatakaBREAKING: ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ

BREAKING: ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹನೂರು ತಾಲೂಕಿನ ಲಕ್ಕೊನಹಳ್ಳಿ ಬಳಿ ಅರಣ್ಯ ಪ್ರದೇಶಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬರೋಬ್ಬರಿ ೫೦ಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿಕೊಂಡಿದೆ. ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗುತ್ತಿದೆ.

ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಒಂದೆಡೆ ಬಿಸಿಲ ಝಳ, ಮತ್ತೊಂದೆಡೆ ಬೆಂಕಿ ಅರಣ್ಯ ಪ್ರದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ. ಬೆಂಕಿ ನಿಯಂತ್ರಿಸಲು ಸಿಬ್ಬಂದಿಗಳು ಜರಸಾಹಸ ಪಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಿಡಿಗೇಡಿಗಳು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ ಸ್ಥಳಕ್ಕೆ ಬಿ ಆರ್ ಟಿ ಮುಖ್ಯಸ್ಥ ಶ್ರೀಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular