HomeJobsಚಿತ್ರದುರ್ಗ: ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 9 ಕರವಸೂಲಿಗಾರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಕೆ ಮಾಡಲು ಫೆಬ್ರವರಿ 8 ಕೊನೆಯ ದಿನವಾಗಿದೆ.

ಗ್ರಾಮ ಪಂಚಾಯತಿ ಹಾಗೂ ನಿಗದಿಪಡಿಸಿರುವ ಮೀಸಲಾತಿ ವಿವರ. ಚಳ್ಳಕೆರೆ ತಾಲ್ಲೂಕಿನ ಮೈಲನಹಳ್ಳಿ ಪ.ಜಾತಿ-ಎ(ಇತರೆ). ಹಿರೇಹಳ್ಳಿ ಸಾ.ಅ.(ಇತರೆ). ಸಾಣಿಕೆರೆ, ಸಾ.ಅ. (ಮಹಿಳೆ). ದೊಡ್ಡೇರಿ, ಪ್ರವರ್ಗ-2ಎ (ಇತರೆ). ಜಾಜೂರು, ಸಾ.ಅ. (ಅಂಗವಿಕಲ).

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ, ಪ.ಪಂಗಡ (ಇತರೆ). ಹೊಸದುರ್ಗ ತಾಲ್ಲೂಕಿನ ತಂಡಗ, ಪ್ರವರ್ಗ-1(ಇತರೆ). ಹೊಳಲ್ಕೆರೆ ತಾಲ್ಲೂಕಿನ ಆರ್.ನುಲೇನೂರು, ಸಾ.ಅ.(ಗ್ರಾಮೀಣ). ಹಿರಿಯೂರು ತಾಲ್ಲೂಕಿನ ಗನ್ನಾಯಕನಹಳ್ಳಿ, ಪ.ಜಾತಿ-ಬಿ(ಇತರೆ) ಬಿಂದುಗಳಿಗೆ ಮೀಸಲಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರವಸೂಲಿಗಾರರ ಹುದ್ದೆಗಳ ಅಧಿಸೂಚನೆ ಹೊರಡಿಸುವ ದಿನಾಂಕಕ್ಕೆ ಮೊದಲು ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ತರಬೇತಿ ಕೋರ್ಸ್ ಪಡೆದಿರಬೇಕು. ಫೆ.8ಕ್ಕೆ ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಈ ಕುರಿತು ತಹಶೀಲ್ದಾರರಿಂದ ವಾಸಸ್ಥಳ ಪ್ರಮಾಣ ಪತ್ರ ಪಡೆದಿರಬೇಕು. ನಿಗದಿತ ದಿನಾಂಕದ ಒಳಗೆ ತಹಶೀಲ್ದಾರರಿಂದ ಜಾತಿ ಪ್ರಮಾಣ ಪತ್ರವನ್ನು ಪಡೆದಿರಬೇಕು. ಇದರೊಂದಿಗೆ ಆಧಾರ್, ರೇಷನ್ ಕಾರ್ಡ್, ವೋಟರ್ ಐಡಿ ದಾಖಲೆಗಳನ್ನು ಸಲ್ಲಿಸಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗೆ 35 ವರ್ಷ, 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಆಯ್ಕೆ ಪ್ರಾಧಿಕಾರವು ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣ ಪತ್ರದಲ್ಲಿ ನಮೂದಿಸಿರುವ ಜನ್ಮ ದಿನಾಂಕವನ್ನು ಪರಿಗಣಿಸಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು chitradurga.nic.in  ರಲ್ಲಿ ನೀಡಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ಇರುವ ಎಲ್ಲಾ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ನೇರವಾಗಿ ವೆಬ್‍ಸೈಟ್‍ನಲ್ಲಿ ಮಾತ್ರ ಅಪ್‍ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿವರವಾದ ಮಾಹಿತಿಗಾಗಿ ವೆಬ್‍ಸೈಟ್ ಸಂಪರ್ಕಿಸುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular