HomeLatest NewsBREAKING : ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ ಅಂಗೀಕಾರ |Public Examination Amendment...

BREAKING : ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ ಅಂಗೀಕಾರ |Public Examination Amendment Bill

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ತೀವ್ರ ಗದ್ದಲ ಮತ್ತು ವಾಕ್ಸಮರದ ನಡುವೆಯೇ ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ–2026 ಧ್ವನಿಮತದ ಮೂಲಕ ಅಂಗೀಕಾರವಾಯಿತು.

ಹೌದು.   ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಕಟ್ಟಿಹಾಕುವ ಉದ್ದೇಶದಿಂದ ತರಲಾದ ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮ ತಡೆ (ತಿದ್ದುಪಡಿ) ಮಸೂದೆ-2026 ಬುಧವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿತು.

ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ದೇಶಾದ್ಯಂತ ಉಂಟಾದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು.ಇದೇ ವೇಳೆ, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಮಾಡಿದ ಹೇಳಿಕೆಯನ್ನು ವಿರೋಧಿಸಿ ಭಾರೀ ಗದ್ದಲ ಉಂಟಾಯಿತು. ಈ ಬೆಳವಣಿಗೆಯ ನಡುವೆಯೇ ಪ್ರತಿಪಕ್ಷ ಸದಸ್ಯರು ಸದನದಿಂದ ಹೊರನಡೆದರು.ಪ್ರತಿಪಕ್ಷದ ತೀವ್ರ ಘೋಷಣೆಗಳ ನಡುವೆಯೂ ಮಸೂದೆಯನ್ನು ಧ್ವನಿಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚರ್ಚೆ ವೇಳೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಗುಂಡಿನ ದಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊಣೆ ಎಂದು ಆರೋಪಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಮಸೂದೆ ಕುರಿತು ಚರ್ಚೆ ನಡೆಯುವ ವೇಳೆ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಪೊಲೀಸ್ ಕ್ರಮವನ್ನು ಪ್ರಶ್ನಿಸಿ, ಅದರ ಬಗ್ಗೆ ಅಮಿತ್ ಶಾ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು. ಆಡಳಿತ ಪಕ್ಷ ಈ ಆರೋಪಗಳನ್ನು ತಳ್ಳಿಹಾಕಿ, ಸರ್ಕಾರ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದಲೇ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕಾನೂನು ತರಲಾಗಿದೆ ಎಂದು ಹೇಳಿತು. ಗದ್ದಲದ ನಡುವೆಯೇ ಸ್ಪೀಕರ್ ಮಸೂದೆಯನ್ನು ಧ್ವನಿಮತಕ್ಕೆ ಹಾಕಿದ್ದು, ಅದು ಅಂಗೀಕಾರವಾಯಿತು.

ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ: ತಪ್ಪಿತಸ್ಥರಿಗೆ 10 ವರ್ಷ ಜೈಲು, 50 ಲಕ್ಷ ರೂ. ವರೆಗೆ ದಂಡ!

ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುವ ವಂಚನೆಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಕಠಿಣ ಶಿಕ್ಷೆ ಹಾಗೂ ದಂಡದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಮುಸೂದೆಯಲ್ಲಿ ಉಲ್ಲೇಖಿಸಲಾಗಿರುವ ಪ್ರಮುಖ ಕಠಿಣ ಕ್ರಮಗಳ ವಿವರ ಹೀಗಿದೆ:

  • 10 ವರ್ಷಗಳ ಜೈಲು ಶಿಕ್ಷೆ: ಪರೀಕ್ಷಾ ಅಕ್ರಮಗಳು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ವ್ಯಕ್ತಿಗಳಿಗೆ ಕನಿಷ್ಠ 10 ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
  • ₹50 ಲಕ್ಷವರೆಗೆ ಭಾರಿ ದಂಡ: ಈ ರೀತಿಯ ಕಾನೂನುಬಹಿರ ಕೃತ್ಯಗಳಲ್ಲಿ ಭಾಗಿಯಾಗುವವರಿಗೆ ₹50 ಲಕ್ಷದವರೆಗೆ ಭಾರಿ ಮೊತ್ತದ ದಂಡವನ್ನು ವಿಧಿಸಲಾಗುತ್ತದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular