HomeKarnatakaಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕರಿಗೆ ಬಯೋಮೆಟ್ರಿಕ್ ಹಾಜರಿ, ಸಂಸತ್ ಮಾದರಿ ಕಾಗದ ರಹಿತ ಶಾಸನಸಭೆ

ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕರಿಗೆ ಬಯೋಮೆಟ್ರಿಕ್ ಹಾಜರಿ, ಸಂಸತ್ ಮಾದರಿ ಕಾಗದ ರಹಿತ ಶಾಸನಸಭೆ

ಬೆಂಗಳೂರು: ಮುಂದಿನ ವಿಧಾನ ಮಂಡಲ ಅಧಿವೇಶನದ ವೇಳೆಗೆ ಶಾಸಕರ ಹಾಜರಾತಿಗೆ ಬಯೋಮೆಟ್ರಿಕ್ ಅಳವಡಿಕೆ ಮಾಡಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.

ವಿಧಾನಸಭೆ ಕಲಾಪ ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಮಾತನಾಡಿದ ಸ್ಪೀಕರ್, ಸಂಸತ್ ಮಾದರಿಯಲ್ಲಿ ಕಾಗದ ರಹಿತ ಶಾಸನಸಭೆ ನಡೆಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ಬಯೋಮೆಟ್ರಿಕ್ ಅಳವಡಿಕೆಯಿಂದ ಶಾಸಕರ ಲಾಗಿನ್ ಹಾಗೂ ಲಾಗ್ ಔಟ್ ಸಮಯ ಕೂಡ ನಿಖರವಾಗಿ ದೊರೆಯುತ್ತದೆ. ಬಯೋಮೆಟ್ರಿಕ್ ಯಂತ್ರವನ್ನು ವಿಧಾನಸಭಾ ಸಭಾಂಗಣದ ಪ್ರವೇಶ ದ್ವಾರಗಳ ಬಳಿ ಅಳವಡಿಸುವ ಸಲಹೆ ಬಂದಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಸಂಸತ್ ಮಾದರಿಯಲ್ಲಿ ಕರ್ನಾಟಕ ವಿಧಾನ ಮಂಡಲಕ್ಕೂ ರಾಷ್ಟ್ರೀಯ ಇ- ವಿಧಾನ್ ಅಪ್ಲಿಕೇಶನ್ ಮೂಲಕ ಅನುಷ್ಠಾನಗೊಳಿಸಲಾಗುವುದು. ಇದನ್ನು ಅನುಷ್ಠಾನಗೊಳಿಸಿಕೊಂಡರೆ ನಮಗೆ ಶೇಕಡ 60ರಷ್ಟು ಖರ್ಚನ್ನು ಅವರೇ ಕೊಡಲಿದ್ದು, ಉಳಿದ 40ರಷ್ಟು ಕೊಡಬೇಕಾಗುತ್ತದೆ. ಹೀಗಾಗಿ ಆಯ್ಕೆ ಮಾಡಿಕೊಂಡಿದ್ದು ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular