‘ಬಿಪರ್ ಜಾಯ್ ಸೈಕ್ಲೋನ್’ ಭೀತಿ : ಹಲವು ರಾಜ್ಯಗಳಲ್ಲಿ ಹೈಅಲರ್ಟ್ ಘೋಷಣೆ, ಕಟ್ಟೆಚ್ಚರ

ದೇಶದ ಹಲವು ರಾಜ್ಯಗಳಲ್ಲಿ ಬಿಪರ್ ಜಾಯ್  ಚಂಡಮಾರುತ ಭೀತಿ ಹಿನ್ನೆಲೆ ಕೇಂದ್ರ ಸಚಿವ ಅಮಿತ್ ಶಾ ಕಟ್ಟೆಚ್ಚರಕ್ಕೆ ಸೂಚನೆ ನೀಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಂಡಮಾರುತದಿಂದಾಗಿ ಪರಿಣಾಮ ಬೀರುವ ಸಾಧ್ಯತೆಯಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಪತ್ತು ನಿರ್ವಹಣಾ ಸಚಿವರೊಂದಿಗೆ ‘ಬಿಪರ್ಜೋಯ್’ ಚಂಡಮಾರುತದ ಸನ್ನದ್ಧತೆಯನ್ನು ಪರಿಶೀಲಿಸಲು ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಅಮಿತ್ ಶಾ, ಭಾರತವು ಅದನ್ನು ಎದುರಿಸಲು ಸಿದ್ಧವಾಗಿದೆ ಮತ್ತು ಚಂಡಮಾರುತದ ಪರಿಣಾಮವು ಹೆಚ್ಚು ಗೋಚರಿಸುವ ಎಲ್ಲಾ ಕರಾವಳಿ ಪ್ರದೇಶಗಳಲ್ಲಿ ದೋಷರಹಿತ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು. ಪರಮಾಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುತ್ತಿರುವ ರಾಜ್ಯಗಳಿಗೆ ತುರ್ತು ಸಂದರ್ಭಗಳಲ್ಲಿ ಅನುಸರಿಸಬೇಕಾದ ಕಟ್ಟುನಿಟ್ಟಾದ ಪ್ರೋಟೋಕಾಲ್ಗಳನ್ನು ನೀಡಲಾಗಿದೆ, ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಈ ಕ್ಷೇತ್ರದಲ್ಲಿ ಸಾಕಷ್ಟು ಸಾಧಿಸಿವೆ ಎಂದು ಶಾ ಹೇಳಿದರು. ಗುಜರಾತ್, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಿದ್ದು, ಚಂಡಮಾರುತದಿಂದಾಗುವ ಅನಾಹುತ ತಡೆಗೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಹೇಳಿದ್ದಾರೆ. ಸೌರಾಷ್ಟ್ರ, ಕಛ್ ಜಿಲ್ಲೆಗೆ ಸುರಕ್ಷಿತ ಪ್ರದೇಶಕ್ಕೆ ಜನರನ್ನ ಸ್ಥಳಾಂತರಿಸಲು ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read