
ಮುಂದಿನ 5 ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಿದ್ದು, ಪ್ರವಾಸಿಗರು, ಸ್ಥಳೀಯರು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಸಮುದ್ರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಮಾಡಲಾಗಿದೆ.
ಬಿಪರ್ಜಾಯ್ ಸೈಕ್ಲೋನ್ ಎಫೆಕ್ಟ್ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಮಳೆಗೆ ಹಿನ್ನಡೆಯಾಗಿದೆ. ಹಲವು ಕಡೆ ಹೊಳೆ, ಕೆರೆಗಳು ಬತ್ತಿ ಹೋಗಿದ್ದು, ನೀರಿಗೆ ಹಾಹಾಕಾರ ಉಂಟಾಗಿದೆ.

