
ಗುಜರಾತ್ ನ ಭಾವ್ ನಗರದಲ್ಲಿ ನೀರಿನಲ್ಲಿ ಸಿಲುಕಿದ್ದ ಜಾನುವಾರುಗಳನ್ನು ರಕ್ಷಿಸಲು ಹೋದ ತಂದೆ-ಮಗ ಇಬ್ಬರು ಮೃತಪಟ್ಟಿದ್ದಾರೆ. ಗುಜರಾತ್ ನ ರಾಜುಲ ತಾಲೂಕಿನ ಮೋರಂಗಿ ಗ್ರಾಮದಲ್ಲಿ ಭಾರಿ ಮಳೆಯೊಂದಿಗೆ ಬೀಸಿದ ಗಾಳಿಗೆ 25 ಕ್ಕೂ ಹೆಚ್ಚು ಮನೆಗಳಿಗೆ ತೀವ್ರ ಹಾನಿಯಾಗಿದೆ. ಹಲವು ಕಡೆ ಗೋಡೆಗಳು ಕುಸಿದು ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗುಜರಾತ್ ನ ಕರಾವಳಿ ಪ್ರದೇಶಗಳಲ್ಲಿ ರೈಲು ಸಂಚಾರ ಕೂಡ ರದ್ದಾಗಿದೆ.

