HomeLatest NewsBIG NEWS: ಹಕ್ಕಿ ಜ್ವರ ಭೀತಿ: ಗೋರಖ್ ಪುರದಲ್ಲಿ 21 ದಿನಗಳ ಕಾಲ ಕೋಳಿ ಅಂಗಡಿಗಳು...

BIG NEWS: ಹಕ್ಕಿ ಜ್ವರ ಭೀತಿ: ಗೋರಖ್ ಪುರದಲ್ಲಿ 21 ದಿನಗಳ ಕಾಲ ಕೋಳಿ ಅಂಗಡಿಗಳು ಬಂದ್

ಲಖನೌ: ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಹಕ್ಕಿ ಜ್ವರದ ಭೀತಿ ಶುರುವಾಗಿದೆ. ಹಲವೆಡೆ ಹಕ್ಕಿ ಜ್ವರದ ಸೋಂಕು ಕಾಣಿಸಿಕೊಂಡಿದೆ.

ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ಹಕ್ಕಿ ಜ್ವರ ಹಿನ್ನೆಲೆಯಲ್ಲಿ 21 ದಿನಗಳ ಕಾಲ ಕೋಳಿ ಅಂಗಡಿಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ.

ಸೋಂಕಿತ ಪ್ರದೇಶಗಳಿಂದ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಇದೀಗ ವರದಿಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ 21 ದಿನಗಳ ಕಾಲ ಕೋಳಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular