HomeIndiaBIG NEWS: ತುಮಕೂರಿನಲ್ಲಿ ನವಿಲುಗಳ ನಿಗೂಢ ಸಾವು ಪ್ರಕರಣ: H5N1 ಸೋಂಕಿನಿಂದ ಸಾವು ದೃಢ: ಜಿಲ್ಲಾಡಳಿತಂದ...

BIG NEWS: ತುಮಕೂರಿನಲ್ಲಿ ನವಿಲುಗಳ ನಿಗೂಢ ಸಾವು ಪ್ರಕರಣ: H5N1 ಸೋಂಕಿನಿಂದ ಸಾವು ದೃಢ: ಜಿಲ್ಲಾಡಳಿತಂದ ಅಲರ್ಟ್ ಘೋಷಣೆ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕೆಲ ದಿನಗಳಿಂದ ನವಿಲುಗಳ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವರದಿ ಬಂದಿದ್ದು, ಹಕ್ಕಿ ಜ್ವರ(H5N1) ದಿಂದ ಮೃತಪಟ್ಟಿವೆ ಎಂದು ದೃಢಪಟ್ತಿದೆ.

ನವಿಲುಗಳ ನಿಗೂಢ ಸಾವು ಹಿನ್ನೆಲೆಯಲ್ಲಿ ನವಿಲುಗಳ ರಕ್ತ ಹಾಗೂ ಅಂಗಾಂಗಗಳ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಯಲ್ಲಿ H5N1 ಸೋಂಕು ಇರುವುದು ದೃಢಪಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಏಪ್ರಿಲ್ 16ರಿಂದ ತುಮಕೂರು ತಾಲೂಕಿನಾದ್ಯಂತ ನವಿಲುಗಳ ಸರಣಿ ಸಾವು ಸಂಭವಿಸುತ್ತಿದೆ. ಕೇವಲ 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಜಿಲ್ಲೆಯಲ್ಲಿ ತಾಪಮಾನ ಏರಿಕೆ ಕಾರಣ ಅತಿಯಾದ ಶಾಖ ಮತ್ತು ನಿರ್ಜಲೀಕರಣದಿಂದ ನವಿಲುಗಳು ಸಾವನ್ನಪ್ಪಿರಬಹುದು ಎಂದು ಶಮ್ಕಿಸಲಾಗಿತ್ತು. ಪ್ರಮುಖವಾಗಿ ತುಮಕೂರು ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾವುಗಳು ವರದಿಯಾಗಿದ್ದವು.

ಇದೀಗ ಮೃತ ನವಿಲುಗಳ ಮಾದರಿಯನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಈಗ ವರದಿ ಬಂದಿದ್ದು, ನವಿಲುಗಳಲ್ಲಿ H5N1 ವೈರಸ್ ಇರುವುದನ್ನು ದೃಢಪಡಿಸಿದ್ದು, ಇದು ಸಾರ್ವಜನಿಕರಲ್ಲಿ ಮತ್ತು ರೈತರಲ್ಲಿ ಆತಂಕ ಮೂಡಿಸಿದೆ. ಹಕ್ಕಿ ಜ್ವರ ದೃಢಪಟ್ಟ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.

ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ರ್ಯಾಪಿಡ್ ರೆಸ್ಪಾನ್ಸ್ ಟೀಮ್ (RRP) ತಂಡಗಳನ್ನು ರಚಿಸಲಾಗಿದೆ. ಐದು ಹಳ್ಳಿಗಳಿಗೆ ಪ್ರತ್ಯೇಕವಾಗಿ 5 ತಂಡಗಳನ್ನು ನಿಯೋಜಿಸಲಾಗಿದ್ದು, ಪ್ರತಿಯೊಂದು ತಂಡದಲ್ಲಿ ಒಬ್ಬ ಪಿಡಿಒ, ಇಬ್ಬರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಮತ್ತು ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಇರಲಿದ್ದಾರೆ. ನವಿಲುಗಳು ಮೃತಪಟ್ಟ ಊರ್ಡಿಗೆರೆ, ಗೂಳೂರು, ಬೊಮ್ಮನಹಳ್ಳಿ, ಟಿ.ಜಿ.ಪಾಳ್ಯ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಬರುವ 33 ಹಳ್ಳಿಗಳ ಮೇಲೆ ನಿಗಾ ಇರಿಸಲಾಗಿದ್ದು, ಸೋಂಕು ಹರಡದಂತೆ ಡಿಸ್‌ಇನ್‌ಫೆಕ್ಟ್ ಸ್ಪ್ರೇ ಮಾಡಲು ಸೂಚಿಸಲಾಗಿದೆ.

ಸುತ್ತಮುತ್ತಲಿನ ಕೋಳಿ ಫಾರ್ಮ್‌ಗಳಲ್ಲಿನ ನಾಟಿ ಕೋಳಿಗಳ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲು ನಿರ್ಧರಿಸಲಾಗಿದೆ. ಕೋಳಿಗಳಲ್ಲೂ ಸೋಂಕು ಕಾಣಿಸಿಕೊಂಡರೆ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ. ಕೋಳಿ ಫಾರ್ಮ್‌ಗಳಿಗೆ ಅಪರಿಚಿತರ ಪ್ರವೇಶ ನಿಷೇಧಿಸಲಾಗಿದೆ. ಯಾವುದೇ ಕೋಳಿಗಳು ಮೃತಪಟ್ಟರೆ ತಕ್ಷಣ ಮಾಹಿತಿ ನೀಡುವಂತೆ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular