BIG NEWS: ಮೂರು ರಾಜ್ಯಗಳಲ್ಲಿ ಹೆಚ್ಚುತ್ತಿದೆ ಹಕ್ಕಿ ಜ್ವರ: ಕರ್ನಾಟಕದಲ್ಲಿ ಅಲರ್ಟ್ ಘೋಷಣೆ: ಕೋಳಿ, ಮೊಟ್ಟೆ ಆಮದಿಗೆ ನಿಷೇಧ!

ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಹೊರ ರಾಜ್ಯಗಳಿಂದ ಕೋಳಿ, ಮೊಟ್ಟೆಗಳ ಆಮದು ಮಾಡಿಕೊಳ್ಳದಂತೆ ನಿಷೇಧಿಸಲಾಗಿದೆ.

ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ. ಎರಡೂ ರಾಜ್ಯಗಳಲ್ಲಿ ಕೋಳಿಗಳ ಮಾರಣಹೋಮ ನಡೆದಿದೆ.

ಸಂಯುಕ್ತ ನೆಲ್ಲೂರು ಜಿಲೆಯ ಗೂಡೂರು, ಸುಳ್ಳೂರುಪೇಟ, ನಾಯ್ಡುಪೇಟ ಮತ್ತು ವೆಂಕಟಗಿರಿ ಪ್ರದೇಶಗಳಲ್ಲಿ ಚಿಕನ್ ಶಾಪ್ ಗಳಲ್ಲಿ ನೂರಾರು ಕೋಳಿಗಳು ಸಾಯುತ್ತಿವೆ. ಹಾಗಾಗಿ ಕೋಳಿ ಖರೀಗೆ ಜನ ಹಿಂದೇಟು ಹಾಕುತ್ತಿದ್ದಾರೆ. ಚಿಕನ್ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.

ಬೇರೆ ರಾಜ್ಯಗಳಲ್ಲಿಯೂ ಸೋಂಕು ಹರಡುವ ಭೀತಿಯಿಂದ ಕೊಳಿ, ಮೊಟ್ಟೆ ಆಮದಿಗೆ ನಿಷೇಧ ಹೇರಲಾಗಿದೆ. ಬೀದರ್, ಬಳ್ಳಾರಿ, ಬೆಳಗಾವಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವ್ಯಾಪಾರಗಳ ಮೇಲೆ ನಿಗಾ ವಹಿಸಲಾಗಿದ್ದು, ಹಿಒರ ರಾಜ್ಯಗಳಿಂದ ಬರುವ ಕೋಳಿ, ಮೊಟ್ಟೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read