HomeLatest Newsಜನನ, ಮರಣ ನೋಂದಣಿ ಕಡ್ಡಾಯ: 21 ದಿನಗಳೊಳಗೆ ಪ್ರಮಾಣಪತ್ರ ವಿತರಿಸಲು ಸೂಚನೆ

ಜನನ, ಮರಣ ನೋಂದಣಿ ಕಡ್ಡಾಯ: 21 ದಿನಗಳೊಳಗೆ ಪ್ರಮಾಣಪತ್ರ ವಿತರಿಸಲು ಸೂಚನೆ

ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದೆ.

ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು 2015 ರ ಏಪ್ರಿಲ್ 1 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾಂಶದ ಮೂಲಕ ಆನ್ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದೆ. ಅದರಂತೆ ಜನನ ಮರಣ ನೋಂದಣಿ(ತಿದ್ದುಪಡಿ-2023) ಅಧಿನಿಯಮ 1960, ಕರ್ನಾಟಕ ಜನನ ಮರಣ ನೋಂದಣಿ(ತಿದ್ದುಪಡಿ 2024) ರಂತೆ ನಿಯಮಗಳಲ್ಲಿ ಕೆಲವು ಮಾರ್ಪಾಡಾಗಿದ್ದು, ಅದರಂತೆ ನಿಯಮಗಳನ್ನು ಪಾಲಿಸಬೇಕಾಗಿ ಕೋರಿದೆ.

ಜನನ ಮರಣ ನೋಂದಣಿಯಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಪ್ರಮುಖ ಅಂಶಗಳು;

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ನಮೂನೆ-1 ರ ಕಾಲಂ 4 ಮತ್ತು 5 ರಲ್ಲಿ ತಂದೆ ತಾಯಿಗಳ ಆಧಾರ್ ಸಂಖ್ಯೆ ಲಭ್ಯವಿಲ್ಲದಿದ್ದಲ್ಲಿ ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸ ನಮೂದಿಸುವುದು.

ಮರಣ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ನಮೂನೆ-2 ರಲ್ಲಿ ಕಾಲಂ 6 ರಲ್ಲಿ ಆಧಾರ್ ಸಂಖ್ಯೆ, ಜನನದ ದಿನಾಂಕ ವಯಸ್ಸು ಲಭ್ಯವಿಲ್ಲದಿದ್ದಲ್ಲಿ ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸ ನಮೂದಿಸುವುದು.

ಎಲ್ಲಾ ಸರ್ಕಾರಿ ಆಸ್ಪತ್ರೆ/ಖಾಸಗಿ ಆಸ್ಪತ್ರೆ ಹಾಗೂ ಮನೆಯಲ್ಲಿ ಸಂಭವಿಸುವ ಜನನ/ ಮರಣ  ಪ್ರಮಾಣ ಪತ್ರಗಳನ್ನು 21 ದಿನಗಳ ಒಳಗಾಗಿ ವಿತರಿಸುವಂತೆ ಕೊಡಗು ಜಿಲ್ಲೆ ಕುಶಾಲನಗರ ಪುರಸಭೆ ಜನನ/ ಮರಣ ನೊಂದಾಣಾಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular