ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕೇಶ್(45) ಆತ್ಮಹತ್ಯೆ ಮಾಡಿಕೊಂಡವರು.
ಹಾಸನದ ದಾಸರಕೊಪ್ಪಲಿನಲ್ಲಿರುವ ಅವರ ಮನೆಯಲ್ಲಿ ಲೋಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನದ ಗುಡ್ಡೇನಹಳ್ಳಿಯಲ್ಲಿ ಎರಡು ಹಾಸ್ಟೆಲ್ ಗಳ ವಾರ್ಡನ್ ಆಗಿ ಲೋಕೇಶ್ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಮ್ಯಾನೇಜರ್ ಆಗಿ ಬಡ್ತಿ ಪಡೆದಿದ್ದರು. ಪ್ರಸ್ತುತ ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ನಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಶನಿವಾರ ರಾತ್ರಿ ಮನೆಯಲ್ಲಿ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

