HomeKarnatakaBIG NEWS: ಬಿಸಿಯೂಟ ಸೇವಿಸಿ 48 ವಿದ್ಯಾರ್ಥಿಗಳು ಅಸ್ವಸ್ಥ; ಮೂವರ ಸ್ಥಿತಿ ಗಂಭೀರ

BIG NEWS: ಬಿಸಿಯೂಟ ಸೇವಿಸಿ 48 ವಿದ್ಯಾರ್ಥಿಗಳು ಅಸ್ವಸ್ಥ; ಮೂವರ ಸ್ಥಿತಿ ಗಂಭೀರ

ಯಾದಗಿರಿ: ಬಿಸಿಯೂರ‍ ಸೇವಿಸಿ 48 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ.

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರಲ್ಲಿ ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಮೂವರು ಮಕ್ಕಳನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳಿದ ಮಕ್ಕಳಿಗೆ ದೋರನಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳು ಬಿಸಿಯೂಟ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದಾರೆ. ನಾಲ್ಕು ಶಾಲೆಗಳಿಗೂ ಖಾಸಗಿ ಶಿವಶಕ್ತಿ ಏಜೆನ್ಸಿಯಿಂದ ಆಹಾರ ಪದಾರ್ಥ ಸರಬರಾಜಾಗುತ್ತದೆ. ನಿನ್ನೆ ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ ನಾಲ್ಕು ಶಾಲೆಯ ಮಕ್ಕಳಲ್ಲಿ ಅನಾರೋಗ್ಯ ಸಮಸ್ಯೆ ಆರಂಭವಾಗಿದೆ. ಆಸ್ಪತ್ರೆಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

 

 

For Latest News Updates, Join Our Whatsapp Community🚩
RELATED ARTICLES

Most Popular