BREAKING NEWS: ಬಿಟ್ ಕಾಯಿನ್ ಪ್ರಕರಣ: FIR ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್ ಪಡೆದ ಡಿವೈಎಸ್ ಪಿ ಶ್ರೀಧರ್ ಪೂಜಾರ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಡಿವೈ ಎಸ್ ಪಿ ಶ್ರೀಧರ್ ಕೆ. ಪೂಜಾರ್ ಹಿಂಪಡೆದಿದ್ದಾರೆ.

ಬಿಟ್ ಕಾಯಿನ್ ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್ ಐ ಆರ್ ರದ್ದು ಕೋರಿ ಶ್ರೀಧರ್ ಪೂಜಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಒಂದು ಕೇಸ್ ನಲ್ಲಿ ಜಾಮೀನು ಪಡೆದ ಬಳಿಕ ಈ ಕೇಸ್ ಗೆ ಜೀವ ನೀಡಲಾಗಿದೆ. ಪ್ರಕರಣ ಸಂಬಂಧ ಮಧ್ಯಂತರ ಜಾಮೀನು ಪಡೆಯಲಾಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ವಾದ ಮಂಡನೆಗೆ ಕಾಲಾವಕಾಶ ನೀಡುವಂತೆ ಶ್ರೀಧರ್ ಪೂಜಾರ್ ಪರ ವಕೀಲರು ಕೋರಿದ್ದರು.

ಆದರೆ ಕಾಲಾವಕಾಶ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶ್ರೀಧರ್ ಪೂಜಾರ್ ಹಿಂಪಡೆದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read