HomeKarnatakaBREAKING: ಬಿಟ್ ಕಾಯಿನ್ ಹಗರಣ: ಇಡಿ ಅಧಿಕಾರಿಗಳಿಂದ ಶ್ರೀಕಿ ಸೇರಿ ಮೂವರು ಅರೆಸ್ಟ್ |Bitcoin Scam

BREAKING: ಬಿಟ್ ಕಾಯಿನ್ ಹಗರಣ: ಇಡಿ ಅಧಿಕಾರಿಗಳಿಂದ ಶ್ರೀಕಿ ಸೇರಿ ಮೂವರು ಅರೆಸ್ಟ್ |Bitcoin Scam

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಕಿಂಗ್ ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಕೆಲ ವರ್ಷಗಳಿಂದ ಬಿಟ್ ಹಗರಣದ ಬಗ್ಗೆ ಇಡಿ ತನಿಖೆ ನಡೆಸುತ್ತಿದ್ದು, ಇದಿಗ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದೆ. ಏಪ್ರಿಲ್ 20ರಂದು ಶ್ರೀಕಿ, ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಸಹೋದರರು, ಕೇಂದ್ರ ಮಾಜಿ ಸಚಿವ ರೆಹಮಾನ್ ಖಾನ್ ಮೊಮ್ಮಗ ಹಕೀಬ್ ನಿವಾಸ ಸೇರಿದಂತೆ 12 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಶ್ರೀಕಿ ಬಂಧನದ ಬೆನ್ನಲ್ಲೇ ಮೊಹಮ್ಮದ್ ನಲಪಾಡ್ ಗೂ ಸಂಕಷ್ಟ ಎದುರಾಗಿದೆ. ಶ್ರೀಕಿ ಸೇರಿದಂತೆ ಇತರೆ ಆರೋಪಿಗಳ ಜೊತೆ ಮೊಹಮ್ಮದ್ ನಲಪಾಡ್ ಸಂಪರ್ಕದಲ್ಲಿರುವ ಆರೋಪವಿದ್ದು, ಈ ನಿಟ್ಟಿನಲ್ಲಿ ಇಡಿ ಅಧಿಕಾರಿಗಳು ನಲಪಾಡ್ ಪಾತ್ರದ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

ರಾಜ್ಯ ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್ ಸೈಟ್ ಹ್ಯಾಕ್ ಮಾಡಿ ಸರ್ಕಾರದ ಹಣವನ್ನು ಬೇರೆ ಬೇರೆ ಅಕೌಂಟ್ ಗಳಿಗೆ ವರ್ಗಾವಣೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ಎಸ್ ಐಟಿಗೆ ವಹಿಸಿ ಆದೇಶ ನೀಡಿತ್ತು. ಎಸ್ ಐಟಿ ತನಿಖೆ ವೇಳೆ ಹಲವು ಡಿಜಿಟಲ್ ವ್ಯಾಲೆಟ್ ಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿತ್ತು.

ಈ ವೇಳೆ ಶ್ರೀಕಿ ಸೇರಿ ಮೊಹಮ್ಮದ್ ನಲಪಾಡ್ ಅವರನ್ನು ಕೂಡ ಎರಡು ಬಾತ್ರಿ ಎಸ್ ಐಟಿ ವಿಚಾರಣೆ ನಡೆಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇಡಿ ಕೂಡ ಬಿಟ್ ಕಾಯಿನ್ ಹಗರಣದ ತನಿಖೆಗೆ ಮುಂದಾಗಿತ್ತು. ಇದೀಗ ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್ ಶ್ರೀಕಿ ಸೇರಿ ಮೂವರನ್ನು ಇಡಿ ಬಂಧಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular