ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಹ್ಯಾಕರ್ ಶ್ರೀಕಿ ಹಾಗೂ ರಾಅಬಿನ್ ಖಂಡೇವಾಲಾ ಸಲ್ಲಿಸಿಸಿದ್ದ ಜಾಮೀನು ಅರ್ಜಿಯನ್ನು ಇಡಿ ವಿಶೇಷ ಕೋರ್ಟ್ ವಜಾಗೊಳಿಸಿದೆ.
ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಕೆಲ ತಿಂಗಳ ಹಿಂದೆ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.
ಇದೇ ವೇಳೆ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಹಾಗೂ ಸಹೋದರರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ತನಿಖೆ ಪೂರ್ಣಗೊಳಿಸಿದ ಬಳಿಕ ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಕೋರಿ ಕೋರ್ಟ್ ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಆದರೆ ಇಡಿ ಅಧಿಕಾರಿಗಳು ಜಾಮೀನಿಗೆ ಆಕ್ಷೇಪ ವ್ಯಕ್ತಪದಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಶ್ರೀಕಿ ಹಾಗೂ ಖಂಡೇವಾಲಾ ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

