ಬೆಂಗಳೂರು: ಅಮಾನತುಗೊಂಡಿದ್ದ ಬಿಜೆಪಿಯ 18 ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ವಾಪಾಸ್ ಪಡೆಯಲಾಗಿದೆ.
ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಆದೇಶ ಹಿಂಪಡೆಯಲು ತೀರ್ಮಾನಿಸಲಾಯಿತು.
ಸಂಧಾನ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು.