HomeKarnatakaBREAKING NEWS: ಬಿಜೆಪಿ 18 ಶಾಸಕರು ಸಸ್ಪೆಂಡ್; ತಕ್ಷಣ ವಿಧಾನಸಭೆಯಿಂದ ಹೊರ ಹೋಗಲು ಸೂಚನೆ

BREAKING NEWS: ಬಿಜೆಪಿ 18 ಶಾಸಕರು ಸಸ್ಪೆಂಡ್; ತಕ್ಷಣ ವಿಧಾನಸಭೆಯಿಂದ ಹೊರ ಹೋಗಲು ಸೂಚನೆ

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

6 ತಿಂಗಳ ಕಾಲ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಕೂಡಲೇ ವಿಧಾನಸಭೆಯಿಂದ ಹೊರ ಹೋಗುವಂತೆ ಸೂಚಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಪೀಠ ಗೌರವಯುತವಾದದ್ದು, ಆದರೆ ವಿಧೇಯಕಗಳನ್ನು ಹರಿದು ಸ್ಪೀಕರ್ ಮೇಲೆ ಎಸೆದು, ಸಿಡಿ ಪ್ರದರ್ಶನ ಮಾಡಿ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಸಕರಾದ ದೊಡ್ಡನಗೌಡ ಪಾಟೀಲ್, ಅಶ್ವತ್ಥನಾರಾಯಣ, ಭರತ್ ಶೆಟ್ಟಿ, ಶರಣು ಸಲಗರ, ಬಿ.ಸುರೇಶ್ ಗೌಡ, ಮುನಿರತ್ನ,ಉಮಾನಾಥ್ ಕೋಟ್ಯಾನ್, ಬಿ.ಪಿ.ಹರೀಶ್, ಧೀರಜ್ ಮುನಿರಾಜು, ಶೈಲೇಂದ್ರ ಬೆಲ್ದಾಳೆ, ಬಸವರಾಜ್ ಮತ್ತಿಮೂಡ ಸೇರಿದಂತೆ 18 ಶಾಸಕರನ್ನು ಅಮಾನತು ಮಾಡಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular